ಸೋಮವಾರಪೇಟೆ ಕೃಷಿ ಪತ್ತಿನ ಸಹಕಾರ ಸಂಘದಿಂದ ಸ್ವಾತಂತ್ರ್ಯ ಸಂಭ್ರಮ
15/08/2020

ಸೋಮವಾರಪೇಟೆ ಆ.15 : ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಕಾಫಿ ಮಂಡಳಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಸಂಘದ ಅಧ್ಯಕ್ಷ ಎಚ್.ಕೆ. ಮಾದಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಬಿ.ಎಂ. ಈಶ್ವರ್ ಹಾಗು ಆಡಳಿತ ಮಂಡಳಿ ಸದಸ್ಯರುಗಳು, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ,, ಕಾಫಿ ಮಂಡಳಿಯ ಹಿರಿಯ ಸಂಪರ್ಕಾಧಿಕಾರಿ ಮುರಳೀಧರ್ ಇದ್ದರು.
ವಾಹನ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಸ್ವಾತಂತ್ರೋತ್ಸ ಆಚರಿಸಲಾಯಿತು. ವಕೀಲರ ಸಂಘದ ಉಪಾಧ್ಯಕ್ಷ ಕೆ.ಎಸ್.ಪದ್ಮನಾಭ ಧ್ವಜಾರೋಹಣ ನೆರವೇರಿಸಿದರು. ಸಂಘದ ಅಧ್ಯಕ್ಷ ಭರತ್, ಮಾಜಿ ಅಧ್ಯಕ್ಷರಾದ ಕೆ.ಜಿ.ಸುರೇಶ್, ಸಿ.ಸಿ.ನಂದ, ಜಯಕರ್ನಾಟಕ ಸಂಘಟಣೆ ತಾಲೂಕು ಅಧ್ಯಕ್ಷ ಸಿ.ಬಿ.ಸುರೇಶ್‍ಶೆಟ್ಟಿ, ಕರವೇ ತಾಲೂಕು ಅಧ್ಯಕ್ಷ ದೀಪಕ್ ಮತ್ತಿತರರು ಹಾಜರಿದ್ದರು.