ಮಡಿಕೇರಿಯಲ್ಲಿ ಪಂಚಕರ್ಮ ವಿಭಾಗದ ನೂತನ ಕಟ್ಟಡ ಉದ್ಘಾಟನೆ

15/08/2020

ಮಡಿಕೇರಿ ಆ.15 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆ ಇವರ ಸಹಯೋಗದಲ್ಲಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಪಂಚಕರ್ಮ ವಿಭಾಗದ ನೂತನ ಕಟ್ಟಡವನ್ನು ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಶನಿವಾರ ಉದ್ಘಾಟಿಸಿದರು.
ನಗರದ ಸರ್ಕಾರಿ ಆಯುಷ್ ಆಸ್ಪತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನೂತನ ಕಟ್ಟಡ ಉದ್ಘಾಟಿಸಿದರು. ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಸಂಸದರಾದ ಪ್ರತಾಪ್ ಸಿಂಹ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭ ಮೋಹನ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಕ್ಷಮಾ ಮಿಶ್ರಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಚ್.ರಾಮಚಂದ್ರ ಇತರರು ಹಾಜರಿದ್ದರು.