ತಲಕಾವೇರಿಯಲ್ಲಿ ಸಚಿವ ವಿ.ಸೋಮಣ್ಣರಿಂದ ವಿಶೇಷ ಪೂಜೆ

15/08/2020

ಮಡಿಕೇರಿ ಆ.15 : ನಾಡಿನ ಜೀವನದಿ, ಕಾವೇರಿ ಉಗಮ ಸ್ಥಳ ತಲಕಾವೇರಿಗೆ ವಸತಿ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಶನಿವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತಲಕಾವೇರಿಯ ಗಣಪತಿ, ಅಗಸ್ತ್ಯೇಶ್ವರ, ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು.
ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ತಲಕಾವೇರಿ-ಭಾಗಮಂಡಲ ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಿ.ಎಸ್.ತಮ್ಮಯ್ಯ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ದೇವಾಲಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಇತರರು ಇದ್ದರು.
ಸಮಿತಿ ಸದಸ್ಯರು ಮತ್ತು ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರು ನಾಡಿಗೆ ಸುಭೀಕ್ಷೆ ತರುವಂತಾಗಲಿ, ಕಾವೇರಿ ಮಾತೆ ಎಲ್ಲರಿಗೂ ಒಳಿತು ಮಾಡುವಂತಾಗಲಿ ಎಂದು ಪ್ರಾರ್ಥಿಸಿದರು.
ಕಾರ್ಯಚರಣೆ ಸ್ಥಳ ವೀಕ್ಷಣೆ ಬಳಿಕ ಭಗಂಡೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಭಗಂಡೇಶ್ವರ ದೇವಾಲಯದ ಮಹಾಗಣಪತಿ, ವಿಷ್ಣು, ಸುಬ್ರಮಣ್ಯ ಮತ್ತು ಭಂಗಡೇಶ್ವರ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದರು.