ಬೆಳೆ ಸಮೀಕ್ಷೆ : ಕರಪತ್ರ ಬಿಡುಗಡೆ ಮಾಡಿದ ಸಚಿವ ಸೋಮಣ್ಣ

15/08/2020

ಮಡಿಕೇರಿ ಆ.15 : ಸರ್ಕಾರ ಬೆಳೆ ಸಮೀಕ್ಷೆ ಸಂಬಂಧಿಸಿದಂತೆ ರೈತರಿಂದ ರೈತರಿಗಾಗಿ ರೈತರಿಗೋಸ್ಕರ ಬೆಳೆ ಸಮೀಕ್ಷೆ ಆರಂಭಿಸಿದ್ದು ಸರ್ಕಾರ ಹೊರಡಿಸಿರುವ ಕರಪತ್ರವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಶನಿವಾರ ಬಿಡುಗಡೆ ಮಾಡಿದರು.
ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು 2020-21 ನೇ ಸಾಲಿನಲ್ಲಿ ರೈತಪರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಕೃಷಿ ಇಲಾಖೆಯ ಮೂಲಕ ದೇಶದಲ್ಲಿ ಪ್ರಥಮ ಬಾರಿಗೆ ರೈತರೇ ಸ್ವತಃ ತಾವು ಬೆಳೆದ ಬೆಳೆಗಳ ಮಾಹಿತಿಗಳನ್ನು ಫಾರ್ಮರ್ಸ್ ಕ್ರಾಪ್ ಸರ್ವೇ ಆಪ್ 2020-21 ಮೂಲಕ ನಮೂದಿಸಲು ಸ್ವಾಭಿಮಾನಿ ರೈತರಿಗೆ ಸುವರ್ಣಾವಕಾಶವನ್ನು ಕಲ್ಪಿಸಿದೆ ಎಂದರು.
ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ, ವಿಸೀರ್ಣ, ನೀರಾವರಿ ಮೂಲದ ಮಾಹಿತಿಯನ್ನು ಬೆಳೆ ಸಮೀಕ್ಷೆ ಆಪ್ ಬಳಸಿ ಆಗಸ್ಟ್ 24 ರ ಒಳಗಾಗಿ ದಾಖಲಿಸಬೇಕಾಗಿದೆ. ರೈತರು ಬೆಳೆ ಕುರಿತು ಮಾಹಿತಿ ದಾಖಲಿಸದೆ ಇದ್ದರೆ ಅಂತಲ್ಲಿ ಖಾಸಗಿ ವ್ಯಕ್ತಿಗಳು ಬೆಳೆ ಸಮೀಕ್ಷೆ ಕೈಗೊಳ್ಳಲಿದ್ದಾರೆ ಎಂದು ಉಸ್ತುವಾರಿ ಸಚಿವರು ವಿವರಿಸಿದರು.
ಈ ಹಿಂದೆ ನಡೆಯುತ್ತಿದ್ದ ಸಮೀಕ್ಷೆಗಳಲ್ಲಿ ವ್ಯತ್ಯಾಸಗಳು ಕಂಡುಬರುತ್ತಿದ್ದ ಪರಿಣಾಮ ರೈತರು ಆಕ್ಷೇಪಣೆಗಳನ್ನು ವ್ಯಕ್ತಪಡಿಸುತ್ತಿದ್ದರು. ಆದರೆ ರೈತರೇ ತಮ್ಮ ಜಮೀನಿನ ಸರ್ವೇ ನಂಬರ್, ಹಿಸ್ಸಾ ನಂಬರ್‍ವಾರು ಬೆಳೆ ಮಾಹಿತಿಯನ್ನು ಜಮೀನಿನಲ್ಲಿ ನಿಂತು ಫೊಟೋ ಅಪ್ಲೋಡ್ ಮಾಡುವುದರ ಮೂಲಕ ದಾಖಲಿಸಬಹುದಾಗಿದೆ. ರೈತರು ಆಪ್‍ನಲ್ಲಿ ದಾಖಲೆ ಮಾಡಿದ ಬೆಳೆ ಸಮೀಕ್ಷೆಯನ್ನು ಸರ್ಕಾರಿ ಅಧಿಕಾರಿಗಳು ಪರಿಶೀಲಿಸಿ ಪ್ರಮಾಣಿಕರಿಸಲಿದ್ದಾರೆ ಎಂದು ವಿ.ಸೋಮಣ್ಣ ಅವರು ತಿಳಿಸಿದರು.
ಬೆಳೆ ಸಮೀಕ್ಷೆಯಿಂದ ಕನಿಷ್ಠ ಬೆಂಬಲ ಬೆಲೆ, ಬೆಳೆ ನಷ್ಟ ಪರಿಹಾರ, ಬೆಳೆ ವಿಮೆ, ಬೆಳೆ ಸಾಲ ಹಾಗೂ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕಾಗಿ ಹಾಗೂ ಪಹಣಿಯಲ್ಲಿ ಬಳಸಲು ರೈತರಿಗೆ ಅನುಕೂಲವಾಗಿದೆ ಎಂದು ವಸತಿ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
ಸಂಸದರಾದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕ್ಷಮಾ ಮಿಶ್ರಾ, ತಹಶೀಲ್ದಾರ್ ಮಹೇಶ್ ಇತರರು ಹಾಜರಿದ್ದರು.