ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯಿಂದ ಆರೋಗ್ಯ ಹಸ್ತ ಕಾರ್ಯಕ್ರಮ

17/08/2020

ಮಡಿಕೇರಿ ಆ. 17 : ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ರಾಣಿಪೇಟೆ ಬಳಿಯ 6ನೇ ವಾರ್ಡ್‍ನಲ್ಲಿ ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಮಡಿಕೇರಿ ನಗರಾಧ್ಯಕ್ಷ ಅಬ್ದುಲ್ ರಜಾಕ್ ಚಾಲನೆ ನೀಡಿದರು.
ಕಾಂಗ್ರೆಸ್ ಮುಖಂಡರು ಮನೆ ಮನೆಗೆ ತೆರೆಳಿ ಕೊರೋನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಿದರು. ಅಲ್ಲದೇ ಮನೆಯ ಪ್ರತಿಯೊಬ್ಬರಿಗೆ ತಪಾಸಣೆ ಮಾಡಿದರು.
ಕಾರ್ಯಕ್ರಮದಲ್ಲಿ ಕೊರೋನಾ ವಾರಿಯರ್ಸ್ ಮಹಮ್ಮದ್ ಇಸ್ರಾರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಸುರಯ್ಯ ಅಬ್ರಾರ್, ಮಾಜಿ ಮೂಡಾ ಅಧ್ಯಕ್ಷ ಚುಮ್ಮಿದೇವಯ್ಯ, ರಾಜೀವ್ ಗಾಂಧಿ ಪಂಚಾಯ್ತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ, ಮಡಿಕೇರಿ ವಿಧಾನಸಭಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ಚಂದ್ರಶೇಖರ್, ಮಾಜಿ ನಗರಸಭಾ ಸದಸ್ಯೆ ತಜಸುಂ, ಯುವಕಾಂಗ್ರೆಸ್ ಅಧ್ಯಕ್ಷ ಸದಾಮುದ್ದಪ್ಪ, ಎಸ್. ಸಿ. ಘಟಕದ ನಗರಾಧ್ಯಕ್ಷ ಮುದ್ದುರಾಜು ಹಾಗೂ ರಿಯಾಜ್ ಹಾಜರಿದ್ದರು.