ಮಡಿಕೇರಿಯಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮದ ಕಾರ್ಯಾಗಾರ

17/08/2020

ಮಡಿಕೇರಿ ಆ. 17 : ಕೆಪಿಸಿಸಿ ಆಯೋಜಿಸಿರುವ ಆರೋಗ್ಯ ಹಸ್ತ ಕಾರ್ಯಕ್ರಮದ ತರಬೇತಿ ಕಾರ್ಯಾಗಾರ ನಗರದ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ತರಬೇತಿ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಕೆ. ಮಂಜುನಾಥ್ ಕುಮಾರ್, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ಕೊಡಗಿನಲ್ಲಿ ಯಶಸ್ವಿಯಾಗಿ ನಡೆದಿದ್ದು , ಆರೋಗ್ಯ ಹಸ್ತ ಕಾರ್ಯಕ್ರಮವನ್ನು ಅತ್ಯಂತ ಯಶಸ್ಸುಗೊಳಿಸಲು ಕರೆ ನೀಡಿದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ಕೋವಿಡ್ ವಾರಿಯರ್ಸ್‌ ಗಳು ತಮ್ಮ ವಲಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿ ಮನೆಗಳಲ್ಲಿ ತಪಾಸಣೆ ನಡೆಸಬೇಕೆಂದು ಹೇಳಿದರು.

ವಾರಿಯರ್ಸ್‌ ಗಳು ಕರ್ತವ್ಯ ನಿರ್ವಹಣೆ ಬಗ್ಗೆ ಕೆಪಿಸಿಸಿ ನಿಯೋಜಿತ ವೈದ್ಯರುಗಳಾದ ಡಾ. ವನಿತಾ, ಡಾ. ಶ್ರೀನಿವಾಸ್ ಮತ್ತು ಡಾ. ಜ್ಯೋತಿ ಯವರು ಮಾಹಿತಿ ನೀಡಿದರು.

ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ,ಜಿಲ್ಲಾ ಕಾಂಗ್ರೆಸ್ ಖಜಾಂಚಿ ಹೆಚ್. ಎಂ. ನಂದಕುಮಾರ್ , ಕೆಪಿಸಿಸಿ ಮಾಜಿ ಕಾರ್ಯದರ್ಶಿ ವೆಂಕಪ್ಪಗೌಡ , ಸಂಯೋಜಕ ಪ್ರದೀಪ್ ರೈ ಪಾಂಬಾರ್ , ಯುವ ಕಾಂಗ್ರೆಸ್ ಅಧ್ಯಕ್ಷ ಹನೀಫ್ , ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯಾ ಅಬ್ರಹಾರ್ , ಅಲ್ಪಸಂಖ್ಯಾತ ಅಧ್ಯಕ್ಷ ಎಂ. ಎ. ಉಸ್ಮಾನ್ , ಕಿಸಾನ್ ಘಟಕದ ಅಧ್ಯಕ್ಷ ನೆರವಂಡ ಉಮೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನೀರಾ ಮೈನಾ , ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್ , ಡಿ.ಸಿ.ಸಿ ವಕ್ತಾರ ಟಿ. ಇ. ಸುರೇಶ್ , ಮಡಿಕೇರಿ ನಗರಾಧ್ಯಕ್ಷ ಅಬ್ದುಲ್ ರಜಾಕ್ , ಪ್ರಮುಖರಾದ ಪ್ರಕಾಶ್ ಆಚಾರ್ಯ , ಚಂದ್ರಶೇಖರ್ ಆರ್. ಪಿ. ಸದಾ ಮುದ್ದಪ್ಪ , ರಾಹುಲ್ ಮಾರ್ಷಲ್ , ಮುದ್ದುರಾಜ್ , ನಾಪಂಡ ರವಿ , ಪ್ರೇಮಾ ಕೃಷ್ಣಪ್ಪ ಸೇರಿದಂತೆ ಮಡಿಕೇರಿ ಬ್ಲಾಕ್ ಮತ್ತು ನಾಪೋಕ್ಲು ಬ್ಲಾಕ್ ವ್ಯಾಪ್ತಿಯ ವಲಯಾಧ್ಯಕ್ಷರುಗಳು , ಬ್ಲಾಕ್ ಕಾಂಗ್ರೆಸ್ ಪಧಾದಿಕಾರಿಗಳು , ಜೊತೆಗೆ ಕೊರೊನಾ ವಾರಿಯರ್ಸ್‌ ಆಗಿ ನಿಯೋಜನೆಗೊಂಡಿರುವ ಕಾರ್ಯಕರ್ತರು ಭಾಗಿಯಾಗಿದ್ದರು.