ಆ.18 ರಂದು ಚೆಟ್ಟಳ್ಳಿಯಲ್ಲಿ ಮಳೆಹಾನಿ ಅರ್ಜಿ ಸ್ವೀಕಾರ

17/08/2020

ಮಡಿಕೇರಿ ಆ.17 : ಸೋಮವಾರಪೇಟೆ ತಾಲ್ಲೂಕು ತೋಟಗಾರಿಕಾ ಅಧಿಕಾರಿ ಶೋಭಾ ಅವರು ಆ.18 ರಂದು ಬೆಳಗ್ಗೆ 10.30 ಗಂಟೆಗೆ ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರು ಹಾಗೂ ಬೆಳೆಗಾರರಿಂದ ಮಳೆಹಾನಿಗೆ ಸಂಬಂಧಿಸಿದಂತೆ ಅರ್ಜಿ ಸ್ವೀಕರಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ತಿಳಿಸಿದ್ದಾರೆ.
ಚೆಟ್ಟಳ್ಳಿ, ವಾಲ್ನೂರು ತ್ಯಾಗತ್ತೂರು ಮತ್ತು ನೆಲ್ಯಹುದಿಕೇರಿ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯಿಂದ ಉಂಟಾದ ತೋಟಗಾರಿಕಾ ಬೆಳೆಗಳ ಹಾನಿಯ ಬಗ್ಗೆ ಪರಿಹಾರಕ್ಕಾಗಿ ಮಾಹಿತಿ ಸಹಿತ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಜೊತೆಯಲ್ಲಿ ಆರ್‍ಟಿಸಿ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಫೋಟೋ ಲಗತ್ತಿಸಬೇಕೆಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.