ಪ್ರಥಮ ಅಧಿವೇಶನ ಇಲಾಖಾ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

17/08/2020

ಮಡಿಕೇರಿ ಆ.17 : ಜಿಲ್ಲೆಯ ಮಡಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್, 18, ಆ.19 ಮತ್ತು ಆಗಸ್ಟ್, 20 ರಂದು ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಕರ್ನಾಟಕ ಲೋಕಸೇವಾ ಆಯೋಗದ 2020ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶಿಸಿದ್ದಾರೆ.
ಷರತ್ತುಗಳು: ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್, ಮುಖಗವಸು ಧರಿಸುವುದು, ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವುದು, ಪರೀಕ್ಷಾ ಕೇಂದ್ರದ ಆವರಣದೊಳಗೆ ಸಂಬಂಧಪಡದ ಯಾವುದೇ ವ್ಯಕ್ತಿಗಳ ಪ್ರವೇಶ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಚಟುವಟಿಕೆ, ಅವ್ಯವಹಾರಗಳಿಗೆ ಆಸ್ಪದವಿರತಕ್ಕದ್ದಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.