ಭಾಗಮಂಡಲ ವಾಜಪೇಯಿ ಶಾಲೆ ಪಿಯುಸಿ ವಿಜ್ಞಾನ ವಿಭಾಗಕ್ಕೆ ಪ್ರವೇಶಕ್ಕೆ ಅರ್ಜಿ ಆಹ್ವಾನ

17/08/2020

ಮಡಿಕೇರಿ ಆ.17 :-ಮಡಿಕೇರಿ ತಾಲ್ಲೂಕಿನ ಭಾಗಮಂಡಲದಲ್ಲಿನ ಅಟಲ್ ಬಿಹಾರಿ ವಾಜಪೇಯಿ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ (ಪಿಸಿಎಂಬಿ ಸಂಯೋಜನೆ) ಆರಂಭಿಸಲಾಗಿದೆ.
ಎಸ್‍ಎಸ್‍ಎಲ್‍ಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ನಿಗದಿತ ಅರ್ಜಿಯೊಂದಿಗೆ ಸೂಕ್ತ ದಾಖಲಾತಿಗಳೊಂದಿಗೆ ಪ್ರಥಮ ಪಿಯುಸಿ ವಿಜ್ಞಾನ ವಿಭಾಗಕ್ಕೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 22 ರಂದು ಕೊನೆ ದಿನವಾಗಿದೆ. ಎಸ್‍ಎಸ್‍ಎಲ್‍ಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಸೂಕ್ತ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳ ಮೆರಿಟ್ ಆಧಾರದ ಮೇಲೆ ಪ್ರಥಮ ಪಿಯುಸಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಕಾಲೇಜಿನಲ್ಲಿ ಉಚಿತ ಊಟ, ವಸತಿ, ಪುಸ್ತಕ, ಲೇಖನ ಸಾಮಗ್ರಿಗಳು, ಸಮವಸ್ತ್ರ ಸೌಲಭ್ಯ ಹಾಗೂ ಇನ್ನಿತರ ಸೌಲಭ್ಯ ಕಲ್ಪಿಸಲಾಗುತ್ತದೆ. ಶಾಲೆಯಲ್ಲಿ ಸುಸಜ್ಜಿತ ಗ್ರಂಥಾಲಯ ಹಾಗೂ ಸಿಇಟಿ ಪರೀಕ್ಷೆ ಸೇರಿದಂತೆ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಲಿಕಾ ಸೌಲಭ್ಯವಿದೆ ಎಂದು ಶಾಲೆಯ ಪ್ರಾಂಶುಪಾಲರಾದ ಲೋಕೇಶ್ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಶಾಲೆಯ ಪ್ರಾಂಶುಪಾಲರ ಮೊಬೈಲ್ 9611307646 ಸಂಪರ್ಕಿಸಲು ಕೋರಿದೆ. ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ಶಾಲೆಯು ಕೊಡಗಿನ ಭಾಗಮಂಡಲದ ಸುಂದರ ಪರಿಸರದಲ್ಲಿ ಸುಸಜ್ಜಿತ ಕಟ್ಟಡ ಹಾಗೂ ಸೂಕ್ತ ವ್ಯವಸ್ಥೆಯಿರುವ ವಸತಿ ಶಾಲೆಯಾಗಿದೆ.