ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

August 17, 2020

ಮಡಿಕೇರಿ ಆ.17 : ಪೊನ್ನಂಪೇಟೆಯ ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2020 ನೇ ಸಾಲಿನ ಪ್ರವೇಶಕ್ಕಾಗಿ ಎಸ್‍ಎಸ್‍ಎಲ್‍ಸಿ ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಮೆಕಾನಿಕ್(2 ವರ್ಷ), ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ (1 ವರ್ಷ) ವೃತ್ತಿಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರವೇಶಕ್ಕೆ ಆನ್‍ಲೈನ್ ವೆಬ್‍ಸೈಟ್ ತಿತಿತಿ.emಠಿಣಡಿg.ಞಚಿಡಿ.ಟಿiಛಿ.iಟಿ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ. ಕನಿಷ್ಠ 14 ವರ್ಷ ವಯೋಮಿತಿ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ) ಪೊನ್ನಂಪೇಟೆ ಇವರನ್ನು ಕೆಲಸದ ವೇಳೆಯಲ್ಲಿ ಅಥವಾ ದೂರವಾಣಿ ಸಂಖ್ಯೆ 08274-249638 ಅಥವಾ ಮೊಬೈಲ್ ಸಂಖ್ಯೆ 9880252218 ಮತ್ತು 8971358220 ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.