ಹಂದಿ ಶೆಡ್‍ನಲ್ಲಿದ್ದ ಮೂವರ ಕೊಲೆ

August 18, 2020

ಚಿತ್ರದುರ್ಗ ಆ.18 : ಹಂದಿಗಳನ್ನು ಕಳವು ಮಾಡಲು ಬಂದ ದುಷ್ಕರ್ಮಿಗಳು ಹಂದಿ ಶೆಡ್‍ನಲ್ಲಿ ಮಲಗಿದ್ದ ಮೂವರನ್ನು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಜಿಲ್ಲೆಯ ನಾಯಕನಹಟ್ಟಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಹಂದಿಗಳನ್ನು ಕದಿಯಲು ಬಂದಿದ್ದ ಕಳ್ಳರ ಗುಂಪೊಂದು ಮೂವರನ್ನು ಕ್ರೂರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹಂದಿ ಕೃಷಿಕ ಮಾರೇಶ್, ಅವರ ಮಗ ಸೀನಪ್ಪ ಮತ್ತು ಮಾರೇಶ್ ಅವರ ಸೋದರಳಿಯ ಯೆಲ್ಲೇಶ್ ಕೊಲೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪರಾಧಿಗಳಿಗಾಗಿ ಬಲೆ ಬೀಸಿದ್ದಾರೆ.
ಕುಟುಂಬಸ್ಥರು ಆರೋಪಿಸಿರುವಂತೆ ಒಂದು ವಾರದ ಹಿಂದೆ ನಾಯಕನಹಟ್ಟಿಗೆ ಬೊಲೆರೊ ವಾಹನದಲ್ಲಿ ಬಂದಿದ್ದ ಆಂಧ್ರ ಪ್ರದೇಶ ಮೂಲದ ಗುಂಪೊಂದು ನಿಮಗೆ ಪಾಠ ಕಲಿಸುವುದಾಗಿ ಎಚ್ಚರಿಕೆ ಕೊಟ್ಟು ತೆರಳಿದ್ದರು.

error: Content is protected !!