ಕೊಡಗು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಕೆ.ಅಝೀಜ್ ಆಯ್ಕೆ

18/08/2020

ಮಡಿಕೇರಿ ಆ. 18 : ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಉಪಾಧ್ಯಕ್ಷರಾಗಿ ಕೆ.ಅಝೀಜ್ (ಕೊಡಗರಹಳ್ಳಿ) ಆಯ್ಕೆಯಾಗಿದ್ದಾರೆ. ಜಿಲ್ಲಾ ಅಧ್ಯಕ್ಷ ಕೆ.ಎಂ.ಗಣೇಶ್ ಅವರ ಶಿಫಾರಸ್ಸು ಮೇರೆಗೆ ಪಕ್ಷ ಸಂಘಟನೆಯ ಹಿತದೃಷ್ಟಿಯಿಂದ ಅಝೀಜ್ ಅವರನ್ನು ನೇಮಕ‌ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸಾಕ್ ಖಾನ್ ಅವರು ತಿಳಿಸಿದ್ದಾರೆ.
ಉಳಿದಿರುವ ಘಟಕಗಳಿಗೂ ನೂತನ ಅಧ್ಯಕ್ಷರುಗಳನ್ನು ನೇಮಿಸಲಾಗುವುದೆಂದು ಹೇಳಿದ್ದಾರೆ.