ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನ

18/08/2020

ಮಡಿಕೇರಿ ಆ.18 : ಪ್ರಸಕ್ತ(2020-21) ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ. 5ನೇ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಾದ ಶ್ರೀ ಸಾಯಿ ಶಂಕರ ಎಜುಕೇಷನಲ್ ಇನ್ಸ್‍ಟ್ಯೂಷನ್ಸ್, ಪ್ರಶಾಂತಿ ನಿಲಯ ಪೊನ್ನಂಪೇಟೆ, ಸೌತ್ ಕೊಡಗು ಮತ್ತು ಸೆಚಿಟ್ ಜೋಸೆಪ್ಸ್ ಗಲ್ರ್ಸ್ ಕಾಂಪೋಸಿಟ್ ಹೈ ಸ್ಕೂಲ್, ಮಡಿಕೇರಿ ಇಲ್ಲಿ 6ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುವುದು.
ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕ ಪಟ್ಟಿಯನ್ನು ಸಲ್ಲಿಸುವುದು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ.2 ಲಕ್ಷ ಒಳಗೆ ಇರಬೇಕು. (ಈ ಬಗ್ಗೆ ತಹಶೀಲಾýರರವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು)
ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ 9945986995, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-08274-261261, ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552 ಮತ್ತು ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.