ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ

19/08/2020

ನವದೆಹಲಿ ಆ.19 : ಇತ್ತೀಚಿಗೆ ಕೊರೋನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಲಿಕೆ ಮತ್ತು ಮೈ ಕೈ ನೋವಿಂದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಲ್ಲಿನ ಏಮ್ಸ್‍ಆಸ್ಪತ್ರೆಗೆ ದಾಖಲಾಗಿದ್ದು, ಕೆಲವು ದಿನಗಳ ಹಿಂದೆ ಅವರಿಗೆ ಕೋವಿಡ್‍ಪರೀಕ್ಷೆ ನಡೆಸಲಾಗಿತ್ತು. ಸೋಂಕಿನ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದರಿಂದ ಗುರುಗ್ರಾಮದಲ್ಲಿರುವ ಮೆದಾಂತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.
ಸದ್ಯ ಅಮಿತ್ ಶಾರ ಕೊವಿಡ್ ಪರೀಕ್ಷೆ ನೆಗೆಟಿವ್ ಬಂದಿದ್ದು ಸಚಿವರು ಆಸ್ಪತ್ರೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ.