ಉಗ್ರ ಸಂಘಟನೆಯೊಂದಿಗೆ ನಂಟು

19/08/2020

ಬೆಂಗಳೂರು ಆ.19 : ಡಿಜೆ ಹಳ್ಳಿಯಲ್ಲಿ ಸಂಭವಿಸಿದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ಅಲ್-ಹಿಂದ್ ಭಯೋತ್ಪಾದನೆ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಎನ್ನಲಾದ ಆರೋಪಿ ಸೇರಿ ಇಬ್ಬರನ್ನು ಬೆಂಗಳೂರು ಪೊಲೀಸರು ಬಂಧನಕ್ಕೊಶಪಡಿಸಿದ್ದು, ಕೇಂದ್ರ ಅಪರಾಧ ವಿಭಾಗದ ಭಯೋತ್ಪಾದನಾ ನಿಗ್ರಹ ದಳ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ನಿಷೇಧಿತ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನೆಂದು ಹೇಳಲಾಗುತ್ತಿರುವ ಸಮಿಯುದ್ದೀನ್ ಹಾಗೂ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ವಾಜೀತ್ ಬಂಧಿತ ವ್ಯಕ್ತಿಗಳಾಗಿದ್ದಾರೆ.
ಸಮಿಯುದ್ದೀನ್ ನನ್ನು ಕೇಂದ್ರ ಅಪರಾಧ ವಿಭಾಗದ ಭಯೋತ್ಪಾದನಾ ನಿಗ್ರಹ ದಳ ಪೊಲೀಸು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.