ಜಿಲ್ಲಾ ಕಾಂಗ್ರೆಸ್ ನಿಂದ ಜನಧ್ವನಿ ಪ್ರತಿಭಟನೆ

19/08/2020

ಮಡಿಕೇರಿ ಆ.19 : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆ.20 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಜನಧ್ವನಿ ಘೋಷ ವಾಕ್ಯದೊಂದಿಗೆ ಪ್ರತಿಭಟನೆ ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.
ಕೋವಿಡ್ ನಿರ್ವಹಣೆಯಲ್ಲಿ ವಿಫಲ, ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ನೀಡದೆ ಇರುವುದು, ಭೂಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮತ್ತು ಕೊಡಗಿನ ಜನರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗುವುದೆಂದು ಹೇಳಿದ್ದಾರೆ.