ಆ. 20 ರಂದು ರಾಜೀವ್ ಗಾಂಧಿ ಜನ್ಮ ದಿನಾಚರಣೆ

August 19, 2020

ಮಡಿಕೇರಿ ಆ.19 : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 75 ನೇ ಜನ್ಮ ದಿನ ಹಾಗೂ ದಿ.ದೇವರಾಜ ಅರಸು ಅವರ 105 ನೇ ಜನ್ಮ ದಿನಾಚರಣೆಯನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆ.20 ರಂದು ಬೆಳಗ್ಗೆ 11 ಗಂಟೆಗೆ ಆಚರಿಸಲಾಗುವುದೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮತ್ತಿತರ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.