ಅಕ್ಷರ ದಾಸೋಹ ನೌಕರರಿಗೆ ಗೌರವ ಧನ ಬಿಡುಗಡೆಗೆ ಒತ್ತಾಯ

19/08/2020

ಮಡಿಕೇರಿ ಆ. 19 : ಕೊಡಗು ಜಿಲ್ಲೆಯಲ್ಲಿ ಅಕ್ಷರ ದಾಸೋಹದಡಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆಯವರು ಹಾಗೂ ಸಹಾಯಕಿಯರಿಗೆ ಗೌರವ ಧನವನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.

ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಎಸ್ ಡಿಪಿಐ ಜಿಲ್ಲಾಧ್ಯಕ್ಷ ಟಿ.ಹೆಚ್.ಅಬ್ಬೂಬಕರ್ ಬಾಕಿ ಇರುವ ಗೌರವಧನವನ್ನು ನೀಡಬೇಕು ಮತ್ತು ವೇತನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದರು.