ಆ.22 ರಂದು ಗಣೇಶ ಚತುರ್ಥಿ : ಕೋಟೆ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಈಡುಗಾಯಿ ಸೇವೆಗೆ ಅವಕಾಶ

19/08/2020

ಮಡಿಕೇರಿ ಆ.19 : ನಗರದ ಓಂಕಾರೇಶ್ವರ ದೇವಾಲಯಕ್ಕೆ ಸೇರಿದ ಕೋಟೆ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಆಗಸ್ಟ್, 22 ರಂದು ಗಣೇಶ ಚತುರ್ಥಿ ಆಚರಣೆಯು ರೂಢಿ ಸಂಪ್ರದಾಯದಂತೆ ಜರುಗಲಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ, ಭಕ್ತಾದಿಗಳ ಆರೋಗ್ಯದ ಸುರಕ್ಷತೆಯ ದೃಷ್ಠಿಯಿಂದ ಸಾರ್ವಜನಿಕ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತಾದಿಗಳ ಧಾರ್ಮಿಕ ಭಾವನೆಗಳನ್ನು ಗಮನದಲ್ಲಿರಿಸಿಕೊಂಡು, ದೇವಾಲಯದ ಆಡಳಿತ ಮಂಡಳಿಯು ತೀರ್ಮಾನಿಸಿರುವಂತೆ ಈಡುಗಾಯಿ ಸೇವೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಅವರು ತಿಳಿಸಿದ್ದಾರೆ.