ಗುರಿಯಂತೆ ಸೋಂಕಿತರ ಪರೀಕ್ಷೆ

20/08/2020

ಬೆಂಗಳೂರು ಆ.20 : ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಬೇಗನೆ ಪತ್ತೆ ಮಾಡಲು, ನಿಗಧಿಪಡಿಸಿದ ಗುರಿಯಂತೆ ಪರೀಕ್ಷೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.
ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಯೋಗಾಲಯಗಳ ಮುಖ್ಯಸ್ಥರೊಂದಿಗೆ ಸಚಿವ ಡಾ.ಕೆ.ಸುಧಾಕರ್ ಅವರು ವೀಡಿಯೋ ಸಭೆ ನಡೆಸಿದರು.
ಕೊರೊನಾ ಸೋಂಕಿತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆ ಮಾಡಿದರೆ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡಬಹುದು. ಆದ್ದರಿಂದ ಪ್ರತಿ ಪ್ರಯೋಗಾಲಯಗಳಲ್ಲಿ ನಿಗದಿ ಮಾಡಿದಷ್ಟು ಸಂಖ್ಯೆಯಲ್ಲಿ ಪರೀಕ್ಷೆ ನಡೆಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡಲು ಇರುವ ಅಡ್ಡಿಗಳನ್ನು ನಿವಾರಿಸಲು ಸರ್ಕಾರದಿಂದ ಎಲ್ಲ ಬಗೆಯ ನೆರವು ನೀಡಲಾಗುವುದು” ಎಂದು ಸಚಿವ ಡಾ.ಕೆ.ಸುಧಾಕರ್ ಸಭೆಗೆ ತಿಳಿಸಿದರು. ಕೋವಿಡ್ ಪರೀಕ್ಷೆಯ ಉಸ್ತುವಾರಿ ಎಸಿಎಸ್ ಡಾ.ಶಾಲಿನಿ ರಜನೀಶ್ ಪಾಲ್ಗೊಂಡಿದ್ದರು.