ಕೇಂದ್ರ ಉದ್ಯೋಗಿಗಳಿಗೆ ಸಿಇಟಿ ಪರೀಕ್ಷೆ

20/08/2020

ನವದೆಹಲಿ ಆ.20 : ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಕಂಪ್ಯೂಟರ್ ಆಧಾರಿತ ಸಾಮಾನ್ಯ ಅರ್ಹತಾ ಪರೀಕ್ಷೆಯನ್ನು ನಡೆಸುವ ಸಲುವಾಗಿ ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್‍ಆರ್‍ಎ) ರಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ
ಸಂಪುಟ ಸಭೆಯ ನಿರ್ಧಾರಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಾವಡೇಕರ್ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಕಂಪ್ಯೂಟರ್ ಆಧಾರಿತ ಸಾಮಾನ್ಯ ಅರ್ಹತಾ ಪರೀಕ್ಷೆಯನ್ನು ನಡೆಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್‍ಆರ್‍ಎ) ರಚಿಸಲು ಅನುಮೋದನೆ ನೀಡಿದೆ’ ಎಂದು ಹೇಳಿದರು.