ಸುಶಾಂತ್ ಸಿಂಗ್ ಪ್ರಕರಣ ಸಿಬಿಐಗೆ

August 20, 2020

ನವದೆಹಲಿ ಆ.20 : ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣವನ್ನು ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ವಹಿಸಿ ಮಹತ್ವದ ಆದೇಶ ಹೊರಡಿಸಿದ್ದು, ನ್ಯಾಯಾಲಯದ ತೀರ್ಪವನ್ನು ಬಾಲಿವುಡ್ ಸ್ಟಾರ್ ನಟ ಹಾಗೂ ನಟಿಯರು ಸ್ವಾಗತಿಸಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪು ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ನಟಿ ಪರಿಣಿತಿ ಚೋಪ್ರಾ ಅವರು, ನ್ಯಾಯಾಲಯದ ಆದೇಶ ಧನಾತ್ಮಕ ಬೆಳವಣಿಗೆಯಾಗಿದೆ. ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಸುತ್ತಿದ್ದು, ಈಗಲಾದರು ಜನರು ವದಂತಿ ಹಬ್ಬುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ. ನಿರ್ಮಾಪಕ ಅಶೋಕ್ ಪಂಡಿತ್ ಅವರು ಟ್ವೀಟ್ ಮಾಡಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದ ಸುಶಾಂತ್ ಕುಟುಂಬಸ್ಥರಿಗೆ ಹಾಗೂ ಕೋಟ್ಯಾಂತರ ಭಾರತೀಯರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

error: Content is protected !!