ಕೊಡಗಿನಲ್ಲಿ ಕೊವೀಡ್ ಸೋಂಕಿಗೆ ಮತ್ತೊಂದು ಬಲಿ : ಮೃತರ ಸಂಖ್ಯೆ 15ಕ್ಕೆ ಏರಿಕೆ

August 20, 2020

ಮಡಿಕೇರಿ ಆ. 20 : ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಮತ್ತೊಂದು ಸಾವು ಸಂಭವಿಸಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 15 ಕ್ಕೇರಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ವಿರಾಜಪೇಟೆ ತಾಲ್ಲೂಕು, ಶ್ರೀಮಂಗಲ ಗ್ರಾಮದ 65 ವರ್ಷದ ಪುರುಷರೊಬ್ಬರು ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು ಮತ್ತು ಇವರು ವಾರದಲ್ಲಿ ಮೂರು ಬಾರಿ ಡಯಾಲಿಸಿಸ್ ಮಾಡಿಸುತ್ತಿದ್ದರು.

ಇವರಿಗೆ ದಿನಾಂಕ:05-08-2020 ರಂದು ಜ್ವರ ಕಾಣಿಸಿಕೊಂಡಿದ್ದು, ದಿನಾಂಕ:07-08-2020 ರಂದು ಗೋಣಿಕೊಪ್ಪದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಂಟಲು/ಮೂಗು ದ್ರವ ಮಾದರಿಯನ್ನು ತೆಗೆದು ಕೋವಿಡ್ ಪರೀಕ್ಷೆ ನಡೆಸಲಾಗಿ, ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ತಕ್ಷಣ ಇವರನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ದಿನಾಂಕ:19-08-2020 ರಂದು ಇವರಿಗೆ ಡಯಾಲಿಸಿಸ್ ಮಾಡುವ ಸಂದರ್ಭ ಇವರಿಗೆ ಹೃದಯಾಘಾತವಾಗಿ ರಾತ್ರಿ 10.50 ಕ್ಕೆ ಮೃತರಾಗಿರುತ್ತಾರೆ.

ಮೃತ ದೇಹದ ಅಂತ್ಯಕ್ರಿಯೆಯನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ನಡೆಸಲಾಗುವುದು.

error: Content is protected !!