ನಷ್ಟ ವಸೂಲಿಗೆ ಕ್ಲೈಮ್ ಕಮಿಷನರ್
21/08/2020

ಬೆಂಗಳೂರು ಆ.21 : ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದಲೇ ನಷ್ಟ ವಸೂಲಿ ಮಾಡಬೇಕು ಎಂಬ ಸರ್ಕಾರದ ನಿರ್ಧಾರಕ್ಕೆ ಕ್ಲೈಮ್ ಕಮಿಷನರ್ ನೇಮಕ ಮಾಡುವ ಕುರಿತು ಇದೇ ಆ.25ರಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡುವ ಸಾಧ್ಯತೆ ಇದೆ.
ಗಲಭೆಯಲ್ಲಿ ಆದ ನಷ್ಟವನ್ನು ವಸೂಲಿ ಮಾಡುವುದಕ್ಕೆ ಹಾಗೂ ಪರಿಹಾರ ನೀಡುವ ಪ್ರಕ್ರಿಯೆಯ ಮೇಲ್ವಿಚಾರಣೆಗೆ ಕ್ಲೇಮ್‍ಕಮಿಷನರ್‍ನೇಮಕ ಮಾಡುವಂತೆ ರಾಜ್ಯ ಸರ್ಕಾರ ಬುಧವಾರ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿನಗಿ ಅವರು ಅರ್ಜಿಯ ವಿಚಾರಣೆಯನ್ನು ಆಗಸ್ಟ್ 25ಕ್ಕೆ ಮುಂದೂಡಿದ್ದಾರೆ. ಅಲ್ಲದೆ ಇದೇ ವಿಚಾರವಾಗಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿನ ಅಂಶಗಳನ್ನು ಗುರುತಿಸಿ ಅವುಗಳ ವಿಚಾರಣೆಯನ್ನೂ ಅಂದೇ ನಡೆಸಲು ಕ್ರಮ ಕೈಗೊಳ್ಳಿ ಎಂದೂ ಸೂಚಿಸಿದೆ.
