ಭೂಕಾಯ್ದೆ ಬಗ್ಗೆ ಕೋರ್ಟ್ ನೋಟಿಸ್

August 21, 2020

ಬೆಂಗಳೂರು ಆ.21 : ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961 ಕುರಿತು ಸುಗ್ರೀವಾಜ್ಞೆ ಹೊರಡಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಬಾಗಲಕೋಟೆ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ನಾಗರಾಜ್‍ಹೊಂಗಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ನ್ಯಾಯಪೀಠ, ಸರ್ಕಾರಕ್ಕೆ ತನ್ನ ನಿಲುವು ತಿಳಿಸುವಂತೆ ಸೂಚನೆ ನೀಡಿದೆ.

error: Content is protected !!