ಕೊಡಗು ಜಿಲ್ಲಾ ಸರ್ವೋದಯ ಸಮಿತಿಯಿಂದ ಸ್ವಾತಂತ್ರ್ಯ ದಿನ ಆಚರಣೆ

21/08/2020

ಮಡಿಕೇರಿ ಆ. 21 : ಕೊಡಗು ಜಿಲ್ಲಾ ಸರ್ವೋದಯ ಸಮಿತಿ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಮಿತಿಯ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ ನಗರದ ಗಾಂಧಿ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ, ಎಲ್ಲರಿಗೂ ಶುಭಕೋರಿದರು.
ನಂತರ ಸಮಿತಿಯ ಪ್ರಮುಖರು ರಾಷ್ಟ್ರಪಿತ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭ ಪ್ರಮುಖರಾದ ಟಿ.ಪಿ. ರಮೇಶ್ ದಿನದ ಮಹತ್ವದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಮಿತಿಯ ಸದಸ್ಯರಾದ ಮುನೀರ್ ಆಹಮ್ಮದ್, ಬೇಬಿ ಮ್ಯಾಥ್ಯು, ಮಹಿಳಾ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಕಾರ್ಯದರ್ಶಿ ಮಿನಾಜ್ ಪ್ರವೀಣ್, ಅಂಬೆಕಲ್ ನವೀನ್, ಪ್ರಮುಖರಾದ ವಿಲ್‍ಫ್ರಡ್ ಕ್ರಸ್ತಾ, ಮುದ್ದಯ್ಯ, ಕೋಡಿ ಚಂದ್ರಶೇಖರ್ ಭಾಗವಹಿಸಿದ್ದರು.