ಕೊಡಗು ಮಹಿಳಾ ಕಾಂಗ್ರೆಸ್‌ನಿಂದ ಸಾಧಕ ವಿದ್ಯಾರ್ಥಿನಿಗೆ ಸ್ಮಾರ್ಟ್‌ಫೋನ್ ಕೊಡುಗೆ

21/08/2020

ಮಡಿಕೇರಿ ಆ.21 : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ಕೆ.ನಿಡುಗಣೆ ಗ್ರಾಮದ ವಿದ್ಯಾರ್ಥಿನಿ ತಾಸಿನಾಳಿಗೆ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಉಚಿತ ಸ್ಮಾರ್ಟ್‌ಫೋನ್ ಕೊಡುಗೆಯಾಗಿ ನೀಡಲಾಯಿತು.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮ ದಿನಾಚರಣೆಯ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯಾ ಅಬ್ರಾರ್ ತಿಳಿಸಿದರು.
ಸರ್ಕಾರ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿನಿ ತಾಸಿನಾಳ ಮನೆಗೆ ಭೇಟಿ ನೀಡಿದ ಅವರು ಪ್ರೋತ್ಸಾಹದ ಮಾತುಗಳನ್ನಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಕೆಪಿಸಿಸಿ ಪ್ರಮುಖ ಮಿಟ್ಟು ಚಂಗಪ್ಪ, ಟಿ.ಪಿ.ರಮೇಶ್, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ನೆರವಂಡ ಉಮೇಶ್, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹೊಸೂರು ಸೂರಜ್, ವಲಯ ಅಧ್ಯಕ್ಷ ಜಾನ್‍ಸಾನ್ ಪಿಂಟೋ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ನಗರ ಮಹಿಳಾ ಘಟಕದ ಅಧ್ಯಕ್ಷರಾದ ಪಾರ್ವತಿ ಫ್ಯಾನ್ಸಿ, ರಾಹುಲ್ ಬ್ರಿಗೇಡ್‍ನ ಅಧ್ಯಕ್ಷ ಚುಮ್ಮಿದೇವಯ್ಯ, ನಗರಸಭಾ ಮಾಜಿ ಅಧ್ಯಕ್ಷೆ ಜುಲೆಕಾಬಿ, ಮಾಜಿ ಸದಸ್ಯೆ ಮುಮ್ತಾಜ್ ಬೇಗಂ ಮತ್ತಿತರರು ಹಾಜರಿದ್ದರು.