ಜಾನುವಾರು ಸಂವರ್ಧನಾ ಮತ್ತು ತರಬೇತಿ ಸಂಸ್ಥೆಯಿಂದ ರಾಸುಗಳ ಹರಾಜು

21/08/2020

ಮಡಿಕೇರಿ ಆ.21 : ಕೂಡಿಗೆಯ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದಲ್ಲಿ ಹೆಚ್ಚುವರಿಯಾಗಿರುವ ಜಾನುವಾರುಗಳನ್ನು ಆಗಸ್ಟ್, 26 ರಂದು ಬೆಳಗ್ಗೆ 11 ಗಂಟೆಗೆ ವಿಲೇವಾರಿ ಮಾಡಲಾಗುತ್ತದೆ ಎಂದು ಕೂಡಿಗೆಯ ಜರ್ಸಿ ತಳಿ ಸಂವರ್ಧನಾ ಕ್ಷೇತ್ರದ ಉಪ ನಿರ್ದೇಶಕರು ತಿಳಿಸಿದ್ದಾರೆ.
ಕೂಡಿಗೆಯ ಜರ್ಸಿ ತಳಿ ಸಂವರ್ಧನಾ ಕ್ಷೇತ್ರದ ಧಾರಣಾ ಸಂಬಂಧಿಸಿದಂತೆ ನಿಗಧಿಪಡಿಸಿದ ಜಾನುವಾರುಗಳ ಸಂಖ್ಯೆಗಿಂತ ಹೆಚ್ಚುವರಿಯಾದ ತಳಿ ಉತ್ಪಾದನೆ, ಸಂವರ್ಧನೆ ಮತ್ತು ಕೃಷಿ ಚಟುವಟಿಕೆಗಳಿಗೆ ಯೋಗ್ಯವಿರುವ ವಿವಿಧ ತಳಿಯ 16 ಜಾನುವಾರುಗಳನ್ನು ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತದೆ. ಕರ್ನಾಟಕ ಉಚ್ಚನ್ಯಾಯಾಲಯದ ಆದೇಶದಂತೆ, ಗೋಶಾಲೆಗಳು, ಸ್ವಯಂ ಸೇವಾ ಸಂಘ, ಕ್ಷೇಮಾಭಿವೃದ್ಧಿ ಸಂಸ್ಥೆಗಳು ಮಾತ್ರ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಉಪ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆಯಲ್ಲಿ 08276-278248 ನ್ನು ಸಂಪರ್ಕಿಸಬಹುದು.