ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ : ಅರ್ಜಿ ಆಹ್ವಾನ

August 21, 2020

ಮಡಿಕೇರಿ ಆ.21 : ಮೀನುಗಾರಿಕೆ ಇಲಾಖೆ ವತಿಯಿಂದ 2020-21 ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ವಿವಿಧ ಕಾರ್ಯಕ್ರಮಗಳ ಸಹಾಯಧನಕ್ಕಾಗಿ ಜಿಲ್ಲೆಯ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನು ಕೃಷಿ ಕೊಳಗಳ ನಿರ್ಮಾಣ, ಮೀನುಮರಿ ಪಾಲನಾ ಕೊಳಗಳ ನಿರ್ಮಾಣ, ಮೀನು ಮಾರಾಟಕ್ಕಾಗಿ ದ್ವಿಚಕ್ರ, ತ್ರಿಚಕ್ರ ವಾಹನ ಖರೀದಿ, ಬಯೋ ಫ್ಲಾಕ್ ಕೊಳ ನಿರ್ಮಾಣ, ಮೀನುಮರಿ ಉತ್ಪಾದನೆ ಹಾಗೂ ಪಾಲನಾ ಕೇಂದ್ರಗಳ ಸ್ಫಾಪನೆ ಶೈತ್ಯೀಕರಿಸಿದ ವಾಹನಗಳು ಆರ್‍ಎಎಸ್ ಘಟಕ ಸ್ಥಾಪನೆ, ಶೈತ್ಯಾಗಾರ /ಅಲಂಕಾರಿಕ ಮೀನು ಉತ್ಪಾದನಾ/ಪಾಲನಾ ಘಟಕ ಸ್ಥಾಪನೆ ಹಾಗೂ ಇತರೆ ಯೋಜನೆಗಳನ್ನು ಪ್ರಾರಂಭಿಸಲು ಸಾಮಾನ್ಯ ಫಲಾನುಭವಿಗಳಿಗೆ ಶೇ.40 ಸಹಾಯಧನ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಫಲಾನುಭವಿಗಳಿಗೆ ಶೇ. 60 ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣಿ-2, ಮಡಿಕೇರಿ-8904809219, ಸೋಮವಾರಪೇಟೆ-8073649362, ವಿರಾಜಪೇಟೆ-9980674821 ನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್, 15 ಕೊನೆಯ ದಿನ ಆಗಿದೆ ಎಂದು ಮಡಿಕೇರಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!