ಸಿನಿಮಾ ಚಿತ್ರೀಕರಣಕ್ಕೆ ಅವಕಾಶ

August 24, 2020

ನವದೆಹಲಿ ಆ.24 : ಸಿನಿಮಾ ಮತ್ತು ಟಿವಿ ಕಾರ್ಯಕ್ರಮಗಳ ಚಿತ್ರೀಕರಣಗಾಗಿ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್ ಇಂದಿಲ್ಲಿ ಪ್ರಕಟಿಸಿದ್ದಾರೆ.
ಅಭಿನಯಿಸುವವರು ಅಲ್ಲದೇ, ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದಿದ್ದಾರೆ. ಆರೋಗ್ಯ ಸಚಿವಾಲಯದ ಜೊತೆಗೆ ಸಮಾಲೋಚಿಸಿ ಮಾರ್ಗಸೂಚಿ ಅಭಿವೃದ್ಧಿಪಡಿಸಿರುವುದಾಗಿ ಸಚಿವರು ಹೇಳಿದ್ದಾರೆ.
ಮಾರ್ಗಸೂಚಿ ಬಿಡುಗಡೆಯಿಂದ ಸಿನಿಮಾ, ಟಿವಿ ಧಾರವಾಹಿಗಳು ಪುನರ್ ಆರಂಭಗೊಳ್ಳುವುದರೊಂದಿಗೆ ಉದ್ಯೋಗವಕಾಶಗಳು ಸೃಷ್ಟಿಯಾಗುವ ಭರವಸೆ ಹೊಂದಿರುವುದಾಗಿ ಸಚಿವರು ತಿಳಿಸಿದ್ದಾರೆ.

error: Content is protected !!