ಕಾನ್ಸ್‌ಟೇಬಲ್ ಹುದ್ದೆ : ಆ.28 ರಂದು ವೈದ್ಯಕೀಯ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ

24/08/2020

ಮಡಿಕೇರಿ ಆ.24 : ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ 2019ನೇ ಸಾಲಿನಲ್ಲಿ ಖಾಲಿ ಇದ್ದ 79 ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್(ಪುರುಷ ಮತ್ತು ಮಹಿಳೆ) ಹಾಗೂ 54 ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಯ ದ್ವಿತೀಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕೊಡಗು ಜಿಲ್ಲಾ ಪೊಲೀಸ್ ಕಾನ್ಸ್‍ಟೇಬಲ್ ನೇಮಕಾತಿ ಸಮಿತಿಯು 2020 ರ ಆಗಸ್ಟ್, 19 ರಂದು ತಯಾರಿಸಿ ಜಿಲ್ಲಾ ಪೊಲೀಸ್ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ದ್ವಿತೀಯ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಆಗಸ್ಟ್, 28 ರಂದು ಬೆಳಗ್ಗೆ 8.30 ಗಂಟೆಗೆ ವೈದ್ಯಕೀಯ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆಗಾಗಿ ಜಿಲ್ಲಾ ಪೊಲೀಸ್ ಕಚೇರಿ, ಮಡಿಕೇರಿ ಇಲ್ಲಿಗೆ ಹಾಜರಾಗಲು ಕರೆ ಪತ್ರವನ್ನು ಅಂಚೆ ಮೂಲಕ ಕಳುಹಿಸಿಕೊಡಲಾಗಿದೆ ಎಂದು ಪೊಲೀಸ್ ನೇಮಕಾತಿ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.