ಕೇರಳ ಬಿಜೆಪಿ ಅಧ್ಯಕ್ಷರ ಬಂಧನ

August 25, 2020

ತಿರುವನಂತಪುರಂ ಆ.25 : ರಾಜತಾಂತ್ರಿಕ ಪಾರ್ಸೆಲ್ ಮೂಲಕ ಚಿನ್ನದ ಕಳ್ಳಸಾಗಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಪಿಣರಾಯಿ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕೇರಳ ವಿಧಾನಸಭೆಯ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ಸೋಮವಾರ ಬಂಧಿಸಲಾಗಿದೆ.
ಮುಖ್ಯಮಂತ್ರಿ ರಾಜೀನಾಮೆ ನೀಡುವವರೆಗೂ ಬಿಜೆಪಿ ತನ್ನ ಪ್ರತಿಭಟನೆಯನ್ನು ಮುಂದುವರಿಸಲಿದೆ ಎಂದು ಹೇಳಿರುವ ಸುರೇಂದ್ರನ್, ತಿರುವನಂತಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವ ಕುರಿತು ವಿಧಾನಸಭೆಯಲ್ಲಿ ಮಾತನಾಡಲು ಬಿಜೆಪಿ ಶಾಸಕ ಒ ರಾಜಗೋಪಾಲ್ ಅವರಿಗೆ ಅವಕಾಶ ನೀಡದಿರುವುದನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಧರಣಿಯನ್ನು ಪಕ್ಷದ ಏಕಮಾತ್ರ ಶಾಸಕ ಒ ರಾಜಗೋಪಾಲ್ ಉದ್ಘಾಟಿಸಿದರು. ಸಂಘಟಿತ ರೀತಿಯಲ್ಲಿ ಎಡರಂಗ ಸರ್ಕಾರ ಅತಿರೇಕದ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

error: Content is protected !!