ದೋಣಿ ಮುಳುಗಿ ಮೃತರಾದವರಿಗೆ 6 ಲಕ್ಷ

25/08/2020

ಬೈಂದೂರು ಆ.24 : ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತದಲ್ಲಿ ಮೃತಪಟ್ಟ ನಾಲ್ಕು ಮೀನುಗಾರರ ಕುಟುಂಬಗಳಿಗೆ ತಲಾ 6 ಲಕ್ಷ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.
ಪರಿಹಾರದ ಆದೇಶದ ಪ್ರತಿಯನ್ನು ಸಂತ್ರಸ್ತರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೋಮವಾರ ತಿಳಿಸಿದ್ದಾರೆ.
ಇಂದು ಸಚಿವರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಅವರೊಂದಿಗೆ ಸಂತ್ರಸ್ತರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು.