ನಾಪೋಕ್ಲು ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ

August 25, 2020

ಮಡಿಕೇರಿ,ಆ.25: ಮಳೆ ಕಡಿಮೆಯಾಗುತ್ತಿದ್ದಂತೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ದಂಧೆ ಪ್ರಾರಂಭವಾಗಿದೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ.
ಸರಕಾರದಿಂದ ಗುತ್ತಿಗೆ ಪಡೆದವರು ಮರಳು ಸಿಗದೆ ಪೇಚಿಗೆ ಸಿಲುಕಿದ್ದಾರೆ. ಐದು ವರ್ಷಗಳಿಗೆ ಮರಳಿನ ಗುತ್ತಿಗೆ ನೀಡಲಾಗಿದೆಯಾದರೂ ನಿಗಧಿತ ಮರಳು ತೆಗೆಯಲು ಗುತ್ತಿಗೆದಾರರಿಗೆ ಸಾಧ್ಯವಾಗುತ್ತಿಲ್ಲ. ಇದರಿಂದ ನಷ್ಟದ ಆತಂಕ ಎದುರಾಗಿದೆ ಎಂದು ಗುತ್ತಿಗೆದಾರರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಸುಮಾರು 50 ಲಕ್ಷ ರೂ.ಗಳಷ್ಟು ನಷ್ಟವಾಗಿದ್ದು, ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

error: Content is protected !!