ಯುವಕರು ಆಧುನಿಕತೆಗೆ ಮಾರು ಹೋಗುತ್ತಿದ್ದಾರೆ

25/08/2020

ಮಡಿಕೇರಿ ಆ. 25 : ಇತ್ತೀಚಿನ ದಿನಗಳಲ್ಲಿ ಆಧುನಿಕತೆಗೆ ಮಾರುಹೋಗುತ್ತಿರುವ ಕೆಲವು ಯುವಕರು ಹಣ ಸಂಪಾದಿಸುವ ಏಕೈಕ ಉದ್ದೇಶದಿಂದ ತಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ ಕಾನೂನುಬಾಹಿರ ಚಟುವಟಿಕೆಯತ್ತ ವಾಲುತ್ತಿದ್ದಾರೆ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾಧ್ಯಕ್ಷ ಕೆ.ಬಿ.ರಾಜು ಆತಂಕ ವ್ಯಕ್ತಪಡಿಸಿದ್ದಾರೆ.
ಕುಶಾಲನಗರದಲ್ಲಿ ಮಾತನಾಡಿದ ಅವರು ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಸರ್ಕಾರಿ ನೌಕರಿ ಸಿಗದೆ ಯುವಕರು ಕೂಲಿ ಕೆಲಸವನ್ನೇ ಅವಲಂಬಿಸಬೇಕಾದ ಅನಿವಾರ್ಯತೆ ಬಂದೊದಗಿದೆ ಎಂದು ಬೇಸರ ವ್ಯಕ್ತಪಡಿಸಿದರು.