ಕುಶಾಲನಗರದ ಬೈಚನಹಳ್ಳಿಯ ಮಹಿಳೆ ಕೋವಿಡ್ ಸೋಂಕಿನಿಂದ ಸಾವು
25/08/2020

ದಿನಾಂಕ:25-08-2020
ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಮತ್ತೊಂದು ಸಾವು ಸಂಭವಿಸಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17 ಕ್ಕೇರಿದೆ. ವಿವರ ಕೆಳಕಂಡಂತಿದೆ.
ಸೋಮವಾರಪೇಟೆ ತಾಲ್ಲೂಕು ಕುಶಾಲನಗರದ ಬೈಚನಹಳ್ಳಿ ನಿವಾಸಿ 77 ವರ್ಷದ ಮಹಿಳೆಯೊಬ್ಬರು ಈ ಹಿಂದಿನಿಂದಲೂ ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದರು.
ಇವರಿಗೆ ದಿನಾಂಕ: 23-08-2020 ರಿಂದ ಕೆಮ್ಮು ಇದ್ದು, ಇಂದು ಮಧ್ಯಾಹ್ನ ಅವರಿಗೆ ತೀವ್ರ ಸುಸ್ತು ಕಾಣಿಸಿಕೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲಿಯೇ ಮೃತರಾಗಿರುತ್ತಾರೆ. ಆಸ್ಪತ್ರೆಯಲ್ಲಿ ಆಂಟಿಜೆನ್ ಕಿಟ್ ಮೂಲಕ ಕೋವಿಡ್ ಪರೀಕ್ಷೆಯನ್ನು ನಡೆಸಿದ್ದು, ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.
ಆದ್ದರಿಂದ ಇದನ್ನು ಕೋವಿಡ್ ಸಂಬಂಧದ ಸಾವು ಎಂದು ಪರಿಗಣಿಸಿ, ಮೃತ ದೇಹದ ಅಂತ್ಯಕ್ರಿಯೆಯನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ನಡೆಸಲಾಗುವುದು.
ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ.