ನೆಟ್ ವರ್ಕ್ ಪ್ರಾಬ್ಲಂ : ಮೋದಿ ಸಭಾಂಗಣದಲ್ಲಿ ಆನ್ ಲೈನ್ ತರಗತಿ

25/08/2020

ಮಡಿಕೇರಿ : ನೆಟ್ ವರ್ಕ್ ಸಮಸ್ಯೆಯಿಂದ ಗ್ರಾಮೀಣ ಭಾಗದ ಪ್ರೌಢಶಾಲಾ ವಿದ್ಯಾರ್ಥಿಗಳು ಆನ್ ಲೈನ್ ತರಗತಿಗಳಿಂದ ವಂಚಿತರಾಗಬಾರದೆನ್ನುವ ಉದ್ದೇಶದಿಂದ ಚೆಟ್ಟಳ್ಳಿ ಪ್ರೌಢ ಶಾಲೆ ಆಡಳಿತ ಮಂಡಳಿ ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ನರೇಂದ್ರ ಸಭಾಂಗಣದಲ್ಲಿ ತರಗತಿಗಳನ್ನು ಆರಂಭಿಸಿದೆ.
8 ರಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳು ನಡೆಯುತ್ತಿದ್ದು, ಸಾಮಾಜಿಕ ಅಂತರ ಹಾಗೂ ಕೋವಿಡ್ ಮುಂಜಾಗೃತಾ ಕ್ರಮಗಳಿಗೆ ಆದ್ಯತೆ ನೀಡಲಾಗಿದೆ. ಸೋಮವಾರಪೇಟೆ ತಾ.ಪಂ ಸದಸ್ಯ ಬಲ್ಲಾರಂಡ ಮಣಿಉತ್ತಪ್ಪ ಅವರು ತರಗತಿಗಳಿಗೆ ಚಾಲನೆ ನೀಡಿದರು. ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ವಿತರಿಸಲಾಯಿತು.