ಹೈ ಫ್ಲೋ ಆಕ್ಸಿಜನ್ ಉಪಕರಣ ಸಮರ್ಪಣೆ

26/08/2020

ಬೆಳಗಾವಿ ಆ.26 : ಕೋವಿಡ್-19 ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ನಾಲ್ಕು ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು.
ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲರು ಕೊಡಮಾಡಿದ ಈ ಉಪಕರಣಗಳನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯ ಬಳಿಕ ಈ ಉಪಕರಣಗಳನ್ನು ಮುಖ್ಯಮಂತ್ರಿಗಳು ಆಸ್ಪತ್ರೆಗೆ ನೀಡಿದರು.
ರಾಜ್ಯದಲ್ಲಿ ಮೊದಲ ಬಾರಿ ಶಾಸಕ ಪಾಟೀಲ ಅವರು ನೀಡಿದ್ದಾರೆ. ಇದೇ ರೀತಿ ಉಳಿದ ಕ್ಷೇತ್ರದ ಶಾಸಕರೂ ಈ ರೀತಿಯ ಹೈ ಫೆÇ್ಲೀ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಲಹೆ ನೀಡಿದರು. ಇದಕ್ಕೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಸುತ್ತೋಲೆ ಕೂಡ ಹೊರಡಿಸಲಾಗುತ್ತದೆ ಎಂದರು.