ಪುಲ್ವಾಮಾ ದಾಳಿಯ ಚಾರ್ಜ್ ಶೀಟ್ ಸಲ್ಲಿಕೆ

August 26, 2020

ನವದೆಹಲಿ ಆ.26 : 2019ರ ಫೆಬ್ರವರಿ 14ರಂದು ನಡೆದಿದ್ದ ಪುಲ್ವಾಮಾ ಉಗ್ರ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಚಾರ್ಜ್ ಶೀಟ್ ಸಲ್ಲಿಸಿದ್ದು ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಮತ್ತು ಆತನ ಸಹೋದರ ಅಬ್ದುಲ್ ಅಸ್ಗರ್ ದಾಳಿಯ ಮಾಸ್ಟರ್ ಮೈಂಡ್ ಎಂದು ಹೇಳಿದೆ.
ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ಎನ್‍ಐಎ 5000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. ಇನ್ನು ಮಾಸ್ಟರ್ ಮೈಂಡ್ ಸೇರಿದಂತೆ ಉಗ್ರ ಮೊಹಮ್ಮದ್ ಉಮರ್ ಫಾರೂಕ್, ಆತ್ಮಾಹುತಿ ಬಾಂಬರ್ ಅದಿಲ್ ಅಹ್ಮದ್ ದಾರ್ ಮತ್ತು ಇತರರ ಹೆಸರನ್ನು ನಮೂದಿಸಿದೆ.
ಇದೇ ವೇಳೆ ಜಮ್ಮುವಿನಲ್ಲಿ ಬಂಧಿಸಲಾಗಿದ್ದು ಆರೋಪಿಗಳಾದ ಅಜಾರ್, ಅಗ್ಸರ್ ಮತ್ತು ಫಾರೂಕಿ ಹೆಸರನ್ನು ನಮೂದಿಸಿದೆ.
2019ರ ಫೆಬ್ರವರಿ 14ರಂದು ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಆತ್ಮಾಹುತಿ ಬಾಂಬರ್ ಸಿಆರ್ ಪಿಎಫ್ ವಾಹನಕ್ಕೆ ಡಿಕ್ಕಿ ಹೊಡೆದು ಸ್ಫೋಟಿಸಿದ್ದು ಈ ದಾಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಯೋಧರು ಹುತಾತ್ಮರಾಗಿದ್ದರು.

error: Content is protected !!