ಮಾಜಿ ಐಪಿಎಸ್ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆ

26/08/2020

ನವದೆಹಲಿ ಆ.26 : ಕರ್ನಾಟಕದ ಸಿಂಗಂ ಎಂದೇ ಹೆಸರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಕುಪ್ಪುಸ್ವಾಮಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಮುರುಳಿಧರ್ ರಾವ್, ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಗೊಂಡರು
ತಮಿಳುನಾಡಿನ ಅಣ್ಣಾಮಲೈ 10 ವರ್ಷಗಳ ಕಾಲ ಕರ್ನಾಟಕದಲ್ಲಿ ಸೇವೆ ಸಲ್ಲಿಸಿ, 2019ರಲ್ಲಿ ಸೇವೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡಿದ ಒಂದು ವರ್ಷದ ನಂತರ ಫೇಸ್ ಬುಕ್ ಲೈವ್ ನಲ್ಲಿ ತಮಿಳುನಾಡು ರಾಜಕೀಯ ಪ್ರವೇಶಿಸಲಿದ್ದು, 2021ರ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುವುದಾಗಿ ಹೇಳಿಕೊಂಡಿದ್ದರು.