ಮಡಿಕೇರಿ ನಗರಸಭೆ ಪೌರಾಯುಕ್ತರಾಗಿ ರಾಮದಾಸ್ ಅಧಿಕಾರ ಸ್ವೀಕಾರ

26/08/2020

ಮಡಿಕೇರಿ ಆ.26 : ಮಡಿಕೇರಿ ನಗರಸಭೆಯ ನೂತನ ಪೌರಾಯುಕ್ತರಾಗಿ ಎಸ್.ವಿ.ರಾಮದಾಸ್ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಕಳೆದ ಜೂನ್ ತಿಂಗಳಿನಿಂದ ಪ್ರಭಾರ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ್ ಅವರು ನೂತನ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿದರು.
ತೋಟಗಾರಿಕಾ ಇಲಾಖೆಯಲ್ಲಿ ಕಳೆದ ೭ ವರ್ಷಗಳಿಂದ ಸಹಾಯಕ ತೋಟಗಾರಿಕಾ ಅಧಿಕಾಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್.ವಿ ರಾಮದಾಸ್ ಅವರು ಸರ್ಕಾರದ ನಿಯೋಜನೆ ಮೇರೆಗೆ ಮಡಿಕೇರಿ ನಗರಸಭೆಯ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.