ಸೆ.4 ರಂದು ಅಂಚೆ ಅದಾಲತ್ ಸಭೆ

August 26, 2020

ಮಡಿಕೇರಿ ಆ.26 : ಅಂಚೆ ಅದಾಲತ್‍ನ ಮುಂದಿನ ಸಭೆಯು ಸೆಪ್ಟೆಂಬರ್, 4 ರಂದು ಬೆಳಗ್ಗೆ 11 ಘಂಟೆಗೆ ಕೊಡಗು ಅಂಚೆ ವಿಭಾಗದ, ವಿಭಾಗೀಯ ಕಚೇರಿಯಲ್ಲಿ ನಡೆಯಲಿದೆ ಎಂದು ಕೊಡಗು ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ಅಂಚೆ ಅದಾಲತ್ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಸೆಪ್ಟೆಂಬರ್, 03 ರೊಳಗೆ ತಲುಪುವಂತೆ ಕಳುಹಿಸಬೇಕು. ನಂತರ ಸೆಪ್ಟಂಬರ್ 4 ರಂದು ನಡೆಯುವ ಸಭೆಯಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಬಂದು ಭಾಗವಹಿಸಬಹುದು ಎಂದು ಕೊಡಗು ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

error: Content is protected !!