ನಗರದ ಸಮಸ್ಯೆಗಳಿಗೆ ಸ್ಪಂದಿಸಲು ಯೋಗೇಶ್ ಕುಮಾರ್ ಮನವಿ

August 26, 2020

ಮಡಿಕೇರಿ ಆ.26 : ರಸ್ತೆ ಅವ್ಯವಸ್ಥೆ ಸೇರಿದಂತೆ ನಗರದಲ್ಲಿರುವ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸುವಂತೆ ಜೆಡಿಎಸ್ ಪ್ರಮುಖ ಹೆಚ್.ಎನ್.ಯೋಗೇಶ್ ಕುಮಾರ್ ಅವರು ಮಡಿಕೇರಿ ನಗರಸಭೆಯ ಪೌರಾಯುಕ್ತರಲ್ಲಿ ಮನವಿ ಮಾಡಿದ್ದಾರೆ.
ನೂತನ ಪೌರಾಯುಕ್ತರಾಗಿ ಎಸ್.ವಿ.ರಾಮದಾಸ್ ಅವರು ಅಧಿಕಾರ ವಹಿಸಿಕೊಂಡ ಸಂದರ್ಭ ಅಭಿನಂದನೆ ಸಲ್ಲಿಸಿದ ಅವರು ಸಮಸ್ಯೆಗಳ ಕುರಿತು ಗಮನ ಸೆಳೆದರು.

error: Content is protected !!