ವಿದೇಶಿ ಕಂಪನಿಗಳ ನೇರ ಹೂಡಿಕೆ

27/08/2020

ಬೆಂಗಳೂರು ಆ.27 : ಹೆಚ್ಚಿನ ಆರ್ಥಿಕ ಪ್ರಗತಿ ಸಾಧಿಸುವ ಉದ್ದೇಶದಿಂದ ಎಲ್ಲಾ ಕ್ಷೇತ್ರಗಳಲ್ಲಿ ವಿದೇಶಿ ಕಂಪನಿಗಳ ನೇರ ಹೂಡಿಕೆಯನ್ನು ರಾಜ್ಯ ಸರ್ಕಾರ ಉತ್ತೇಜಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಬುಧವಾರ ಆಯೋಜಿಸಿದ್ದ ಇಂಡೋ-ಜಪಾನಿಸ್ ಬಿಸಿನೆಸ್ ಫೆÇೀರಂನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಪಾನಿನ ಕಂಪನಿಗಳಿಂದ ನೇರ ಹೂಡಿಕೆಗೆ ಎಲ್ಲಾ ರೀತಿಯ ಸಹಕಾರ ಒದಗಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ ಹೇಗೆ ಮತ್ತು ಅದಕ್ಕಾಗಿ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳೇನು ಎಂಬುದನ್ನು ಜಪಾನಿ ನಿಯೋಗಕ್ಕೆ ಮನವರಿಕೆ ಮಾಡಿಕೊಟ್ಟರು.
ಉದ್ಯಮ ಕ್ಷೇತ್ರದಲ್ಲಿ ಕರ್ನಾಟಕ ಮತ್ತು ಜಪಾನ್ ನಡುವಿನ ಔದ್ಯಮಿಕ ಸಂಬಂಧ ಉತ್ತಮವಾಗಿದೆ. ವಿಶೇಷವಾಗಿ, ಜಪಾನ್ ಗೆ ಸಂಬಂಧಿಸಿದಂತೆ, ತುಮಕೂರಿನ ವಸಂತನರಸಪುರದಲ್ಲಿ ಜಪಾನೀಸ್ ಕೈಗಾರಿಕಾ ಟೌನ್ ಶಿಪ್ ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ.