ಕೇರಳದಲ್ಲಿ ದಾಖಲೆ ಸಂಖ್ಯೆಯ ಸೋಂಕಿತರು

27/08/2020

ಕೊಚ್ಚಿ ಆ.26 : ಮಾರಕ ಕೊರೋನಾ ಸೋಂಕು ಕೇರಳದಲ್ಲಿ ಸಂಪೂರ್ಣ ನಿಯಂತ್ರಣದಲ್ಲಿದೆ ಎನ್ನುವಾಗಲೇ ಮತ್ತೆ ಸೋಂಕು ತನ್ನ ಆರ್ಭಟ ಮುಂದುವರೆಸಿದ್ದು, ಇಂದು ಹೊಸ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಬರೆದಿದೆ.
ಕೇರಳದಲ್ಲಿ ಇಂದು ಒಂದೇ ದಿನ 2476 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದು ಕೇರಳದಲ್ಲಿ ದಾಖಲಾದ ಈವರೆಗಿನ ಒಂದು ದಿನದ ಗರಿಷ್ಟ ಸೋಂಕು ಪ್ರಕರಣಗಳಾಗಿವೆ. ಆ ಮೂಲಕ ಕೇರಳದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 66,831ಕ್ಕೆ ಏರಿಕೆಯಾಗಿದೆ. ಈ ಪೈಕಿ ಕಳೆದ 24 ಗಂಟೆಗಳಲ್ಲಿ 1351 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಕೇರಳದಲ್ಲಿ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ 41, 694ಕ್ಕೆ ಏರಿಕೆಯಾಗಿದೆ.
ಕೇರಳದಲ್ಲಿ ಪ್ರಸ್ತುತ 22, 344 ಸಕ್ರಿಯ ಪ್ರಕರಣಗಳಿವೆ. ಅಂತೆಯೇ ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ಒಟ್ಟು 13 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೇರಳದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ.