ಅಧಿಕಾರಿಗಳ ನಿವಾಸದ ಮೇಲೆ ದಾಳಿ

August 27, 2020

ಬೆಂಗಳೂರು ಆ.27 : ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನಲ್ಲಿ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ವಸ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಾದ ಹಿನ್ನೆಲೆಯಲ್ಲಿ ಮೈಸೂರು ಅಭಿವೃದ್ಧಿ ಅಧಿಕಾರಿ ನಾಗರಾಜು ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಎಂಎಸ್ ಎನ್ ಬಾಬು ನಿವಾಸದ ಮೇಲೆ ದಾಳಿ ನಡೆದಿದೆ. ಇಬ್ಬರಿಗೆ ಸೇರಿದ ಐದು ಜಾಗದಲ್ಲಿ ಎಸಿಬಿ ದಾಳಿ ನಡೆದಿದೆ. ದಾಳಿ ವೇಳೆ ನಾಗೇಂದ್ರ ಮನೆಯಲ್ಲಿ 9 ಲಕ್ಷ ನಗದು 1.5 ಕೆಜಿ ಚಿನ್ನ, ಬಾಬು ಮನೆಯಲ್ಲಿ 5 ಲಕ್ಷ ನಗದು 1.5 ಕೆಜಿ ಚಿನ್ನ ಪತ್ತೆಯಾಗಿದೆ.

error: Content is protected !!