ಕೋವಿಡ್ ಸೋಂಕಿಗೆ ಐಮಂಗಲ ಗ್ರಾಮದ ಪುರುಷ ಬಲಿ : ಮೃತರ ಸಂಖ್ಯೆ 18ಕ್ಕೆ ಏರಿಕೆ

27/08/2020

ಕೊಡಗು ಜಿಲ್ಲೆಯಲ್ಲಿ ಈ ದಿನ ಕೋವಿಡ್ ಸಂಬಂಧ ಮತ್ತೊಂದು ಸಾವು ಸಂಭವಿಸಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಪ್ರಕರಣಗಳ ಒಟ್ಟು ಸಂಖ್ಯೆ 18 ಕ್ಕೇರಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ವಿರಾಜಪೇಟೆ ತಾಲ್ಲೂಕು, ಐಮಂಗಲ ಗ್ರಾಮದ ನಿವಾಸಿ 55 ವರ್ಷದ ಪುರುಷರೊಬ್ಬರುವ ಹಿಂದಿನಿಂದಲೂ ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ದಿನಾಂಕ:15-08-2020 ರಂದು ಅವರಿಗೆ ಸುಸ್ತು, ತಲೆ ಸುತ್ತುವಿಕೆ ಮತ್ತು ಜ್ವರ ಕಾಣಿಸಿಕೊಂಡಿದೆ.

ದಿನಾಂಕ:17-08-2020 ರಂದು ಇವರು ನೇರವಾಗಿ ಕೋವಿಡ್ ಆಸ್ಪತ್ರೆಗೆ ಬಂದಿದ್ದು, ರಾಪಿಡ್ ಆಂಟಿಜೆನ್ ಕಿಟ್ ಮೂಲಕ ಕೋವಿಡ್ ಪರೀಕ್ಷೆ ನಡೆಸಿದ್ದು, ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.

ಇವರನ್ನು ತಕ್ಷಣ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು, ಇವರ ದೇಹದಲ್ಲಿ ಆಕ್ಸಿಜನ್ ಪ್ರಮಾಣ ಕಡಿಮೆ ಇದ್ದುದರಿಂದ ಐ.ಸಿ.ಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಬೆಳಿಗ್ಗೆ 10.00 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಮೃತ ದೇಹದ ಅಂತ್ಯಕ್ರಿಯೆಯನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ನಡೆಸಲಾಗುವುದು.