ಧೈರ್ಯ-ಸಾಹಸ ಪ್ರದರ್ಶಿಸಿದ ಮಕ್ಕಳಿಗೆ “ಹೊಯ್ಸಳ” ಮತ್ತು “ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ” ಅರ್ಜಿ ಆಹ್ವಾನ

August 27, 2020

ಮಡಿಕೇರಿ ಆ.27 : ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.
ಸಮಯಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆ ಪ್ರಕರಣವು ಆಗಸ್ಟ್ 2019 ರಿಂದ ಜುಲೈ 2020ರ ಒಳಗೆ ನಡೆದಿರಬೇಕು. ಹಾಗೂ ಆಗಸ್ಟ್ 1- 2002 ರಂದು ಮತ್ತು ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.
ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10 ಸಾವಿರ ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ. 2020-21ನೇ ಸಾಲಿನ ಪ್ರಶಸ್ತ್ತಿಗಾಗಿ ನಿಗದಿಪಡಿಸಿರುವ ಕನ್ನಡ ಆವೃತ್ತಿಯ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ, ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08272 – 298379 ಸಂಪರ್ಕಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 10 ಕೊನೆಯ ದಿನಾಂಕವಾಗಿದೆ ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಅರುಂಧತಿ ಅವರು ತಿಳಿಸಿದ್ದಾರೆ.