ಪ್ರವಾಹದಿಂದ 2032 ಕೋಟಿ ರೂ. ಹಾನಿ

August 28, 2020

ಬೆಂಗಳೂರು ಆ.28 : ರಾಜ್ಯದಲ್ಲಿ ಪ್ರವಾಹದಿಂದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ 2032 ಕೋಟಿ ರೂ. ಮೊತ್ತದ ರಸ್ತೆ, ಸೇತುವೆ ಹಾಗೂ ಕಟ್ಟಡಗಳು ಹಾನಿಗೊಳಗಾಗಿದ್ದು, ತುರ್ತಾಗಿ ದುರಸ್ತಿ ಕಾಮಗಾರಿ ಕೈಗೊಳ್ಳಲು 478 ಕೋಟಿ ರೂ. ಅನುದಾನದ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರವಾಹದಿಂದ ಆಗಿರುವ ಹಾನಿ ವಿವರ, ಹಾಗೂ ತುರ್ತು ಕಾಮಗಾರಿಗಳ ಕುರಿತ ಚರ್ಚಿಸಿದ ಡಿಸಿಎಂ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಭವಿಸಿದ ಪ್ರವಾಹ, ಭೀಕರ ಮಳೆಯಿಂದಾಗಿ ಲೋಕೋಪಯೋಗಿ ಇಲಾಖೆಯ ರಸ್ತೆಗಳು, ಸೇತುವೆಗಳು, ಕಟ್ಟಡಗಳು ದುರಸ್ತಿಗೆ ಬಂದಿರುವುದರಿಂದ ಸಾರ್ವಜನಿಕರಿಗೆ ಸಂಪರ್ಕಕ್ಕೆ ತೊಂದರೆಯಾಗಿದೆ.
ಉತ್ತರ ವಲಯದಲ್ಲಿ 1437 ಕೋಟಿ, ಕೇಂದ್ರ ವಲಯದಲ್ಲಿ 135 ಕೋಟಿ, ದಕ್ಷಿಣ ವಲಯದಲ್ಲಿ 181 ಕೋಟಿ, ಈಶಾನ್ಯ ವಲಯದಲ್ಲಿ 71 ಕೋಟಿ ಹಾಗೂ ರಾಷ್ಟ್ರೀಯ ಹೆದ್ದಾರಿಯ 26 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ, ಕಟ್ಟಡಗಳು ಹಾನಿಗೊಳಗಾಗಿವೆ. ತುರ್ತಾಗಿ ಸಂಪರ್ಕ ಕಲ್ಪಿಸಬೇಕಾದ ಕಾಮಗಾರಿಗಳನ್ನು ಕೂಡಲೇ ಕೈಗೊಳ್ಳಬೇಕಿದೆ.

error: Content is protected !!