ಪರೀಕ್ಷೆಗಳಿಗೆ ಸಿದ್ದರಾಮಯ್ಯ ವಿರೋಧ

28/08/2020

ಬೆಂಗಳೂರು ಆ.28 : ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸಲು ತಮ್ಮ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳು “ಪರೀಕ್ಷೆಗಳನ್ನು ತೆಗೆದುಕೊಳ್ಳಲು ತಮ್ಮ ಪ್ರಾಣವನ್ನು ಪಣಕ್ಕಿಡಬೇಕೆ?” ಎಂದು ಪ್ರಶ್ನಿಸಿದ್ದಾರೆ.
ಭಾರತದ ಪ್ರಧಾನ ಶೈಕ್ಷಣಿಕ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋಸ್ರ್ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಸಿದ್ದರಾಮಯ್ಯ ವಿರೋಧ ಪಕ್ಷಗಳ ಮಾತಿಗೆ ದನಿಗೂಡಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ “ಎಲ್ಲರ ವಿರೋಧದ ಹೊರತಾಗಿಯೂ ಬಿಜೆಪಿ ಸರ್ಕಾರ ನೀಟ್ ಮತ್ತು ಜೆಇಇ ನಡೆಸುವ ನಿರ್ಧಾರಕ್ಕೆ ಅಂಟಿಕೊಂಡಿದೆ. ಕೋವಿಡ್ 19 ಪ್ರಕರಣಗಳು ದೇಶದಲ್ಲಿ ವೇಗವಾಗಿ ಹರಡುತ್ತಿದೆ. ವಿದ್ಯಾರ್ಥಿಗಳು ಅಪಾಯಕ್ಕೆ ಒಡ್ಡಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ. ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅವರು ತಮ್ಮ ಪ್ರಾಣವನ್ನು ಪಣಕ್ಕಿಡಬೇಕೆ?” ಎಂದು ಕೇಳಿದ್ದಾರೆ.